1 Corinthians 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
Kannada BSI Bible 2016
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.
Kannada Bible (KNCL) BSI 2016
ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.