1 Corinthians 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
Kannada BSI Bible 2016
ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.
Kannada Bible (KNCL) BSI 2016
ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.