1 Corinthians 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Kannada BSI Bible 2016
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Kannada Bible (KNCL) BSI 2016
ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.