1 Corinthians 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
Kannada BSI Bible 2016
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
Kannada Bible (KNCL) BSI 2016
ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.