1 Corinthians 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವಾದರೊ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
Kannada BSI Bible 2016
ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.
Kannada Bible (KNCL) BSI 2016
ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.