1 Corinthians 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
Kannada BSI Bible 2016
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
Kannada Bible (KNCL) BSI 2016
ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.