1 Corinthians 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
Kannada BSI Bible 2016
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನಂತೂ ದೇವರಾತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಲಾರದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಬೇಕಾಯಿತು.
Kannada Bible (KNCL) BSI 2016
ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.