1 Corinthians 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
Kannada BSI Bible 2016
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
Kannada Bible (KNCL) BSI 2016
ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.