1 Corinthians 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
Kannada BSI Bible 2016
ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
Kannada Bible (KNCL) BSI 2016
ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.