1 Corinthians 3:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
Kannada BSI Bible 2016
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.
Kannada Bible (KNCL) BSI 2016
ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.