1 Corinthians 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ಮತ್ತೊಬ್ಬನು “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ನೀವು ಹೀಗೆ ವಾಗ್ವಾದ ಮಾಡುವಾಗ ಲೋಕದ ಜನರಂತೆಯೇ ವರ್ತಿಸುವವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?
Kannada BSI Bible 2016
ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು - ನಾನು ಪೌಲನವನು ಎಂದು ಮತ್ತೊಬ್ಬನು - ನಾನು ಅಪೊಲ್ಲೋಸನವನು ಎಂದು ಹೇಳುತ್ತಿರುವಾಗ ನೀವು ಕೇವಲ ನರಪ್ರಾಣಿಗಳಾಗಿದ್ದೀರಲ್ಲವೇ.
Kannada Bible (KNCL) BSI 2016
ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು, “ನಾನು ಪೌಲನವನು,” ಎಂದು ಮತ್ತೊಬ್ಬನು, “ನಾನು ಅಪೊಲ್ಲೋಸನವನು,” ಎಂದೂ ಹೇಳುತ್ತಿರುವಾಗ, ನೀವು ಕೇವಲ ಮಾನವರಂತೆ ಆಗಿದ್ದೀರಲ್ಲವೇ?