1 Corinthians 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
Kannada BSI Bible 2016
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
Kannada Bible (KNCL) BSI 2016
ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.