1 Corinthians 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,
Kannada BSI Bible 2016
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ
Kannada Bible (KNCL) BSI 2016
ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,