1 Corinthians 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.
Kannada BSI Bible 2016
ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಆಗಿದ್ದೇವೆ.
Kannada Bible (KNCL) BSI 2016
ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪಕೀರ್ತಿ ಹೊಂದಿ ಸಮಾಧಾನವಾಗುತ್ತೇವೆ. ನಾವು ಈಗಿನ ವರೆಗೂ ಭೂಮಿಯ ಕಸವೋ ವಿಶ್ವದ ಹೊಲಸೋ ಎಂಬಂತೆ ಆಗಿದ್ದೇವೆ.