1 Corinthians 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
Kannada BSI Bible 2016
ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
Kannada Bible (KNCL) BSI 2016
ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.