1 Corinthians 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.
Kannada BSI Bible 2016
ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.
Kannada Bible (KNCL) BSI 2016
ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.