1 Corinthians 4:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
Kannada BSI Bible 2016
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನಲ್ಲ ಅವರ ಶಕ್ತಿಯನ್ನೇ ಗೊತ್ತುಮಾಡಿಕೊಳ್ಳುವೆನು.
Kannada Bible (KNCL) BSI 2016
ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.