1 Corinthians 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.
Kannada BSI Bible 2016
ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಾದರೋ ನಿವ್ಮಿುಂದಾಗಲಿ ಮನುಷ್ಯರು ನೇವಿುಸುವ ದಿನದಲ್ಲಾಗುವ ನ್ಯಾಯ ಸಭೆಯಿಂದಾಗಲಿ ವಿಚಾರಣೆಯಾಗುವದು ಅತ್ಯಲ್ಪ ಕಾರ್ಯವಾಗಿದೆ; ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
Kannada Bible (KNCL) BSI 2016
ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.