1 Corinthians 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
Kannada BSI Bible 2016
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.
Kannada Bible (KNCL) BSI 2016
ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.