1 Corinthians 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, "ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.
Kannada BSI Bible 2016
ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.
Kannada Bible (KNCL) BSI 2016
ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.