1 Corinthians 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
Kannada BSI Bible 2016
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
Kannada Bible (KNCL) BSI 2016
ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?