1 Corinthians 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
Kannada BSI Bible 2016
ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.
Kannada Bible (KNCL) BSI 2016
ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?