1 Corinthians 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
Kannada BSI Bible 2016
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣವಿಧಿ ಹೊಂದಿದವರನ್ನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ದೇವದೂತರಿಗೂ ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ನೋಟವಾದೆವು.
Kannada Bible (KNCL) BSI 2016
ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.