1 Corinthians 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
Kannada BSI Bible 2016
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
Kannada Bible (KNCL) BSI 2016
ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.