1 Corinthians 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
Kannada BSI Bible 2016
ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲುಕೊಳ್ಳುವವರು, ವಿಗ್ರಹಾರಾಧಕರು ಇವರ ಸಹವಾಸವನ್ನು ಬಿಟ್ಟುಬಿಡಬೇಕೆಂದು ನನ್ನ ತಾತ್ಪರ್ಯವಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾಗುವದು.
Kannada Bible (KNCL) BSI 2016
ಅಂದರೆ, ಈ ಲೋಕದಲ್ಲಿರುವ ದುರಾಚಾರಿಗಳು, ಲೋಭಿಗಳು, ಸುಲಿಗೆಗಾರರು, ವಿಗ್ರಹಾರಾಧಕರು - ಇಂಥವರ ಸಹವಾಸವನ್ನು ಬಿಟ್ಟುಬಿಡಬೇಕೆಂಬುದು ನನ್ನ ಮಾತಿನ ಅರ್ಥವಲ್ಲ. ಹಾಗೆ ಮಾಡಿದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು.