1 Corinthians 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭೆಗೆ ಸೇರಿಲ್ಲದ ಜನರಿಗೆ ತೀರ್ಪು ಮಾಡುವುದು ನನ್ನ ಕೆಲಸವಲ್ಲ. ಅವರಿಗೆ ದೇವರೇ ತೀರ್ಪು ಮಾಡುವನು. ಆದರೆ ಸಭೆಗೆ ಸೇರಿರುವ ಜನರಿಗೆ ನೀವು ತೀರ್ಪು ಮಾಡಬೇಕು. “ದುಷ್ಟನನ್ನು ಸಭೆಯಿಂದ ಹೊರಗೆ ಹಾಕಿ” ಎಂದು ಪವಿತ್ರ ಗ್ರಂಥ ಹೇಳುತ್ತದೆ. (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
Kannada BSI Bible 2016
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಗಿನವರನ್ನು ಕುರಿತು ತೀರ್ಪುಮಾಡುವದಕ್ಕೆ ನನಗೇನಧಿಕಾರ? ಒಳಗಿನವರನ್ನು ಕುರಿತು ತೀರ್ಪುಮಾಡುವವರು ನೀವು ಅಲ್ಲವೇ?
Kannada Bible (KNCL) BSI 2016
ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?