1 Corinthians 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
Kannada BSI Bible 2016
ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.
Kannada Bible (KNCL) BSI 2016
ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?