1 Corinthians 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ದೇಹ ನಿಮ್ಮೊಂದಿಗೆ ಇಲ್ಲದಿದ್ದರೂ ನಾನು ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಆ ಪಾಪ ಮಾಡಿದ ವ್ಯಕ್ತಿಗೆ ನಾನು ಆಗಲೇ ತೀರ್ಪು ಮಾಡಿದ್ದೇನೆ. ನಾನು ಅಲ್ಲಿದ್ದಿದ್ದರೆ ಯಾವ ತೀರ್ಪನ್ನು ಕೊಡುತ್ತಿದ್ದೆನೋ ಅದೇ ತೀರ್ಪನ್ನು ಕೊಟ್ಟಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
Kannada BSI Bible 2016
ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ -
Kannada Bible (KNCL) BSI 2016
ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ.