1 Corinthians 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
Kannada BSI Bible 2016
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.
Kannada Bible (KNCL) BSI 2016
ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.