1 Corinthians 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?
Kannada BSI Bible 2016
ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ ಅನ್ಯಜನರ ಮುಂದೆ ಹೋಗುವದಕ್ಕೆ ಅವನಿಗೆ ಧೈರ್ಯವುಂಟೋ?
Kannada Bible (KNCL) BSI 2016
ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?