1 Corinthians 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
Kannada BSI Bible 2016
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವೇನೋ ಉಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವುಂಟು, ಆದರೆ ನಾನು ಯಾವದಕ್ಕೂ ಒಳಗಾಗುವದಿಲ್ಲ.
Kannada Bible (KNCL) BSI 2016
“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.