1 Corinthians 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
"ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
Kannada BSI Bible 2016
ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
Kannada Bible (KNCL) BSI 2016
“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.