1 Corinthians 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
Kannada BSI Bible 2016
ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ನಮ್ಮನ್ನೂ ತನ್ನ ಪರಾಕ್ರಮದಿಂದ ಎಬ್ಬಿಸುವನು.
Kannada Bible (KNCL) BSI 2016
ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.