1 Corinthians 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
Kannada BSI Bible 2016
ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂಳೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬದು ನಿಮಗೆ ತಿಳಿಯದೋ? ಗಂಡಹೆಂಡರಿಬ್ಬರು ಒಂದೇ ಶರೀರವಾಗಿರುವರೆಂದು ದೇವರು ಹೇಳುತ್ತಾನಲ್ಲಾ.
Kannada Bible (KNCL) BSI 2016
“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ?