1 Corinthians 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
Kannada BSI Bible 2016
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ?
Kannada Bible (KNCL) BSI 2016
ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?