1 Corinthians 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?
Kannada BSI Bible 2016
ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಹಿಕ ಜೀವಸಂಬಂಧದಲ್ಲಿ ನಿರ್ಣಯಿಸತಕ್ಕ ಕಾರ್ಯಗಳು ನಿಮ್ಮಲ್ಲಿದ್ದರೆ ತೀರ್ಪುಮಾಡುವದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಕುಳ್ಳಿರಿಸಿಕೊಳ್ಳುತ್ತೀರೋ?
Kannada Bible (KNCL) BSI 2016
ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?