1 Corinthians 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
Kannada BSI Bible 2016
ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
Kannada Bible (KNCL) BSI 2016
ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?