1 Corinthians 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
Kannada BSI Bible 2016
ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಅಗಲಿದರೂ ಪುರುಷಸಹವಾಸವಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾಧಾನವಾಗಬೇಕು; ಮತ್ತು ಗಂಡನು ಹೆಂಡತಿಯನ್ನು ಬಿಡಬಾರದು.
Kannada Bible (KNCL) BSI 2016
ಒಂದು ವೇಳೆ ಅಗಲಿದರೆ ಮತ್ತೆ ಮದುವೆಯಾಗದಿರಲಿ. ಇಲ್ಲವೆ, ತನ್ನ ಪತಿಯೊಂದಿಗೆ ಸಂಧಾನಮಾಡಿಕೊಳ್ಳಲಿ. ಅಂತೆಯೇ ಪತಿಯಾದವನು ತನ್ನ ಸತಿಯನ್ನು ಬಿಟ್ಟುಬಿಡದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.