1 Corinthians 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.
Kannada BSI Bible 2016
ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನನ್ನ ಅಭಿಪ್ರಾಯವೇನಂದರೆ - ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಒಗತನಮಾಡುವದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.
Kannada Bible (KNCL) BSI 2016
ಮಿಕ್ಕವರಿಗೆ ನಾನು ಹೇಳುವುದೇನೆಂದರೆ: ಇದು ನನ್ನ ಮಾತು, ಪ್ರಭುವಿನದಲ್ಲ: ಒಬ್ಬ ಸಹೋದರನಿಗೆ ಕ್ರೈಸ್ತವಿಶ್ವಾಸಿಯಲ್ಲದ ಸತಿ ಇದ್ದರೆ, ಆಕೆ ಅವನೊಡನೆ ದಾಂಪತ್ಯ ಜೀವನ ನಡೆಸಲು ಒಪ್ಪಿದರೆ, ಆಕೆಯನ್ನು ಬಿಟ್ಟುಬಿಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.