1 Corinthians 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.
Kannada BSI Bible 2016
ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಒಗತನ ಮಾಡುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.
Kannada Bible (KNCL) BSI 2016
ಹಾಗೆಯೇ ಒಬ್ಬ ಕ್ರೈಸ್ತ ಸಹೋದರಿಗೆ ಕ್ರೈಸ್ತವಿಶ್ವಾಸಿಯಲ್ಲದ ಪತಿ ಇದ್ದು ಅವನು ಆಕೆಯೊಂದಿಗೆ ದಾಂಪತ್ಯಜೀವನ ನಡೆಸಲು ಒಪ್ಪಿದರೆ, ಆಕೆ ಅವನನ್ನು ಬಿಟ್ಟುಬಿಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಸ್ತ್ರೀಗೆ ಅವಿಶ್ವಾಸಿಯಾದ ಗಂಡನಿರಲಾಗಿ ಅವನು ಆಕೆಯೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಆಕೆಯು ಅವನನ್ನು ಬಿಡದಿರಲಿ.