1 Corinthians 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
Kannada BSI Bible 2016
ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.
Kannada Bible (KNCL) BSI 2016
ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.