1 Corinthians 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
Kannada BSI Bible 2016
ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
Kannada Bible (KNCL) BSI 2016
ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.