1 Corinthians 7:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.
Kannada BSI Bible 2016
ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದನೋ ಅವನು ಸುನ್ನತಿ ಮಾಡಿಸಿಕೊಳ್ಳಬಾರದು.
Kannada Bible (KNCL) BSI 2016
ಸುನ್ನತಿಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿಮಾಡಿಸಿಕೊಂಡದ್ದಕ್ಕಾಗಿ ಚಿಂತಿಸಬೇಕಾಗಿಲ್ಲ. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿ ಮಾಡಿಸಿಕೊಳ್ಳುವ ಅವಶ್ಯಕತೆಯಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.