1 Corinthians 7:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.
Kannada BSI Bible 2016
ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದಿಯೋ? ಅದಕ್ಕೆ ಚಿಂತೆಮಾಡಬೇಡ. ಆದರೆ ಬಿಡುಗಡೆ ಹೊಂದುವದಕ್ಕೆ ನಿನ್ನ ಕೈಯಿಂದಾದರೆ ಸ್ವತಂತ್ರನಾಗುವದೇ ಉತ್ತಮ.
Kannada Bible (KNCL) BSI 2016
ದೇವರು ಕರೆದಾಗ ನೀನು ದಾಸ್ಯದಲ್ಲಿದ್ದೆಯೋ? ಚಿಂತೆಯಿಲ್ಲ. ಆದರೆ ಸ್ವತಂತ್ರನಾಗುವ ಅವಕಾಶ ದೊರೆತರೆ ಅದನ್ನು ಬಿಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.