1 Corinthians 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
Kannada BSI Bible 2016
ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
Kannada Bible (KNCL) BSI 2016
ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.