1 Corinthians 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
Kannada BSI Bible 2016
ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕನ್ನಿಕೆಯರನ್ನು ಕುರಿತು ಕರ್ತನಿಂದ ಬಂದ ಆಜ್ಞೆ ನನಗೆ ಯಾವದೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
Kannada Bible (KNCL) BSI 2016
ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.