1 Corinthians 7:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
Kannada BSI Bible 2016
ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
Kannada Bible (KNCL) BSI 2016
ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.