1 Corinthians 7:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
Kannada BSI Bible 2016
ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.
Kannada Bible (KNCL) BSI 2016
ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.