1 Corinthians 7:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
Kannada BSI Bible 2016
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
Kannada Bible (KNCL) BSI 2016
ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.