1 Corinthians 7:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
Kannada BSI Bible 2016
ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ. ನಾನು ನಿಮಗೆ ಉರ್ಲು ಹಾಕಬೇಕೆಂದು ಇದನ್ನು ಹೇಳುವದಿಲ್ಲ, ನೀವು ಸಜ್ಜನರಿಗೆ ತಕ್ಕ ಹಾಗೆ ನಡೆದು ಭಿನ್ನಭಾವವಿಲ್ಲದೆ ಕರ್ತನಿಗೆ ಪಾದಸೇವೆಯನ್ನು ಮಾಡುವವರಾಗಬೇಕೆಂದು ನಿಮ್ಮ ಹಿತಕ್ಕೋಸ್ಕರವೇ ಹೇಳುತ್ತೇನೆ.
Kannada Bible (KNCL) BSI 2016
ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ.